SHOCKING NEWS: ಇಬ್ಬರು ಮಕ್ಕಳನ್ನು ಕೊಲೆಗೈದು ನೇಣಿಗೆ ಶರಣಾದ ತಾಯಿ!

ಕೊಪ್ಪಳ: ಇಬ್ಬರು ಪುಟ್ಟ ಮಕ್ಕಳನ್ನು ಕೊಲೆಗೈದು ಬಳಿಕ ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಲಕ್ಷ್ಮವ್ವ ಹನುಮಪ್ಪ ಭಜಂತ್ರಿ (30) ಮಕ್ಕಳಾದ ರಮೇಶ (4) ಹಾಗೂ ಜಾನ್ವಿ (2) ಮೃತರು. ಇಬ್ಬರು ಮಕ್ಕಳಿಗೂ ನೇಣುಬಿಗಿದು ಕೊಲೆಗೈದು ಬಳಿಕ ಲಕ್ಷ್ಮವ್ವ ತಾನೂ ನೇಣಿಗೆ ಶರಣಾಗಿದ್ದಾಳೆ.

ಮಹಿಳೆಯ ಈ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ ಪಿ ಡಾ.ರಾಮ್ ಎಲ್ ಅರಸಿದ್ದಿ ಭೇಟಿ ನೀಡಿ, ಪರಿಶೀಲನೆ‌ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read