ಬೆಂಗಳೂರು ನಗರ ಜಿಲ್ಲೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನವೆಂಬರ್ 13 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತವಾಗಿ ಫೋಟೋಗ್ರಾಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 45 ವರ್ಷ ವಯಸ್ಸಿನ ಪುರುಷರು ಅಕ್ಟೋಬರ್ 30 ರಂದು ಬೆಳಿಗ್ಗೆ 10.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8970476050, 9591514754, 9686248369 ಮತ್ತು 9505894247 ಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
