BIG NEWS: ಸಚಿವ ಸಂಪುಟ ಪುನಾರಚನೆ: ಚರ್ಚೆ ಬೆನ್ನಲೇ ಕುತೂಹಲ ಮೂಡಿಸಿದ ಸಚಿವ ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ದೆಹಲಿ ಪ್ರವಾಸ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ವಿಚಾರಗಳ ಚರ್ಚೆ ಬೆನ್ನಲ್ಲೇ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಚಿವ ಕೃಷ್ಣ ಭೈರೇಗೌಡ ಇಬ್ಬರೂ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಸಚಿವ ದ್ವಯರು ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಹಾಗೂ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಸಚಿವ ಸಂಪುಟ ಪುನಾರಚನೆ ವೇಳೆ ಹಿರಿಯ ಸಚಿವರನ್ನೇ ಕೈಬಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಈ ಗಾಗಲೇ ಕೃಷ್ಣ ಭೈರೇಗೌಡ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಹೇಳಿಕೆ ನೀಡಿದ್ದಾರೆ.

ನವೆಂಬರ್ 20ರಂದು ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಪುನಾರಚನೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಕೃಷ್ಣ ಭೈರೇಗೌಡ ಇಬ್ಬರೂ ದೆಹಲಿ ಪ್ರವಾಸ ಕೈಗೊಂಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read