HomeLatest NewsBREAKING: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯ್ದೆ ಉಲ್ಲಂಘನೆ  ಮಾಡಿದ 1.82 ಲಕ್ಷ ಜನರಿಗೆ ದಂಡ

BREAKING: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯ್ದೆ ಉಲ್ಲಂಘನೆ  ಮಾಡಿದ 1.82 ಲಕ್ಷ ಜನರಿಗೆ ದಂಡ

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುವ, “ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ, 2003 ಅಡಿಯಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್-2025 ತಿಂಗಳವರೆಗೆ ಸುಮಾರು 1,82,000 ಜನರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಅಧ್ಯಕ್ಷ ವಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ.

ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಶಾಲಾ/ಕಾಲೇಜುಗಳಲ್ಲಿ 100 ಮೀ. ವ್ಯಾಪ್ತಿಯಲ್ಲಿ 2470 ಜನರು ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲಾಗಿದೆ. ಇದರಿಂದಾಗಿ ರೂ. 45 ಲಕ್ಷ ಪ್ರತಿ ವರ್ಷ ದಂಡ ಸಂಗ್ರಹವಾಗುತ್ತಿದೆ. ಈ ಪೈಕಿ, 21 ವರ್ಷದೊಳಗಿನ ಯುವಜನರ ದತ್ತಾಂಶವನ್ನು ನೀಡಲು ಆರೋಗ್ಯ ಇಲಾಖೆಗೆ ಸೂಚಿಸಿದರು.

21 ವರ್ಷದೊಳಗಿನ ಯುವಜನರನ್ನು ಧೂಮಪಾನ, ಮಧ್ಯಪಾನ, ತಂಬಾಕು ಸೇವನೆ, ಡ್ರಗ್ಸ್ ಸೇವೆಯಂತಹ ಮಾದಕ ವಸ್ತುಗಳ ಸೇವನೆಯಿಂದ ವ್ಯಸನ ಮುಕ್ತರನ್ನಾಗಿಸಲು ಮಾದಕ ವಸ್ತು ವ್ಯಸನ ಮುಕ್ತ ಕೇಂದ್ರಗಳ ಮೂಲಕ ಏಪ್ರಿಲ್ ನಿಂದ ಸೆಪ್ಟೆಂಬರ್-2025ರವರೆಗೆ ಸುಮಾರು 1 ಲಕ್ಷ ಯುವಜನರಿಗೆ ಸಮಾಲೋಚನೆಯನ್ನು ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಮತ್ತು ನಿಮಾನ್ಸ್ ಸಹಯೋಗದಲ್ಲಿ ಟೆಲಿಮಾನಸ್ 14416 ಸಹಾಯವಾಣಿಯನ್ನು ತೆರೆಯಲಾಗಿದೆ. ಈ ಸಹಾಯವಾಣಿ ಮೂಲಕ ಮಾದಕ ವ್ಯಸನ ಪೀಡಿತ ಮಕ್ಕಳ ಮುಂದಿನ ಭವಿಷ್ಯವನ್ನು ಈ ಸುಧಾರಿಸಲು ಅಗತ್ಯ ಸಹಾಯ ಮತ್ತು ಸಮಾಲೋಚನೆಯನ್ನು ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೃಶ್ಯ ಮಾಧ್ಯಮಗಳು ಅತ್ಯಾಚಾರ, ಮಹಿಳಾ ದೌರ್ಜನ್ಯ ಆತ್ಮಹತ್ಯೆ ಮತ್ತು ಇತರ ಪ್ರಕರಣಗಳನ್ನು ವೈಭವೀಕರಿಸಿ ಭಯಗೊಳ್ಳುವಂತೆ ಪ್ರಸಾರ ಮಾಡುವುದನ್ನು ನಿಯಂತ್ರಿಸಬೇಕು. ಪ್ರೆಸ್ ಕೌನ್ಸಿಲ್ ಮಾರ್ಗಸೂಚಿಗಳನ್ನು ದೃಶ್ಯ ಮಾಧ್ಯಮಗಳು ಅಳವಡಿಸಿಕೊಳ್ಳಬೇಕು. ಯಾರು ಈ ರೀತಿಯ ಪ್ರಕರಣಳಿಗೆ ಪ್ರಚಾರ ನೀಡುತ್ತಾರೋ ಅವರ ಮೇಲೆ ಮಹಿಳೆಯರ ಅಸಭ್ಯ ಪ್ರಾತಿನಿಧ್ಯ(ನಿಷೇಧ) ಕಾಯ್ದೆ-1986 (Indescent Representation of Women (Prohibition) Act-1986)  ರಡಿಯಲ್ಲಿ ಸ್ವಯಂ ಪ್ರೇರಿತವಾಗಿ ಕ್ರಮವನ್ನು ದೃಶ್ಯ ಮಾಧ್ಯಮಗಳು ತೆಗೆದುಕೊಳ್ಳಬೇಕು. ಅಥವಾ ಕೇಬಲ್ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮವಹಿಸಲು, ಅಥವಾ ಫಿಲ್ಮ್ಸ್ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮ ವಹಿಸಲು, ಪತ್ರಿಕೋದ್ಯಮಕ್ಕೆ ಸಂಬಂಧಿಸಿದ್ದರೆ ಪತ್ರಿಕೋದ್ಯಮ ಕಾಯಿದೆಯಡಿ ಕ್ರಮವಹಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಹಾಗೂ ವಾರ್ತಾ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಯಿತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular