HomeLatest NewsSHOCKING: ಚಿಕ್ಕಮಗಳೂರಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಶಿಕ್ಷಕಿ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ

SHOCKING: ಚಿಕ್ಕಮಗಳೂರಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಶಿಕ್ಷಕಿ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಾಲೆ ಮುಗಿಸಿ ಮನೆಗೆ ವಾಪಸ್ ಆಗುವಾಗ 25 ವರ್ಷದ ಶಿಕ್ಷಕಿ ಮೇಲೆ ಹಲ್ಲೆ ನಡೆಸಲಾಗಿದೆ. ಮರಕ್ಕೆ ಕಟ್ಟಿ ಹಾಕಿ ವಿವಸ್ತಗೊಳಿಸಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಕೂಗಾಟ ಕೇಳಿ ಸ್ಥಳಕ್ಕೆ ಬಂದ ಮನೆಯವರು ರಕ್ಷಣೆ ಮಾಡಿದ್ದಾರೆ, ಮಾರಣಾಂತಿಕ ಹಲ್ಲೆಗೊಳಗಾದ ಶಿಕ್ಷಕಿಗೆ ಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಮೀಪದ ಗ್ರಾಮದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ 3 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular