GOOD NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕಿ/ನೌಕರರಿಗೆ ಗುಡ್ ನ್ಯೂಸ್ : ಶಿಕ್ಷಣ ಇಲಾಖೆಯಿಂದ ಶಿಶು ಪಾಲನಾ ರಜೆ ಮಂಜೂರು.!

ಬೆಂಗಳೂರು :   ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕಿ/ನೌಕರರಿಗೆ ಶಿಶು ಪಾಲನಾ ರಜೆ ಮಂಜೂರು ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಸುತ್ತೋಲೆಯಲ್ಲಿ..?

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ/ ನೌಕರರಿಗೆ ಶಿಶುಪಾಲನ ರಜೆ ಸೌಲಭ್ಯವನ್ನು ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ರಜೆ ಸೌಲಭ್ಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕಿಯರು/ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡಲು ನಿರ್ದೇಶಿಸಲಾಗಿರುತ್ತದೆ.

ಅದರಂತೆ ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಅಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ/ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಒದಗಿಸಲು ಅಗತ್ಯ ಕ್ರಮವಹಿಸಲು ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read