HomeLatest Newsಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್ 27 ರಿಂದ 13 ದಿನಗಳ ಕಾಲ ನಿರುದೋಗಿ ಪುರುಷ ಮತ್ತು ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 45 ವರ್ಷ ವಯಸ್ಸಿನ ಪುರುಷ ಹಾಗೂ ಮಹಿಳೆಯರು ಅಕ್ಟೋಬರ್ 27 ರಂದು ಬೆಳಿಗ್ಗೆ 09 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8970476050, 9686248369, 9591514754 ಗಳಿಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular