ಯಾದಗಿರಿ: 18 ವರ್ಷ ತುಂಬಿದ ಬಳಿಕ ಮದುವೆಯಾಗುವುದಾಗಿ ನಂಬಿಸಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ.
ಬಾಲಕಿ ಸಂಬಂಧಿ ವಿರುದ್ಧ ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕಿಯ ತಾಯಿ ಪತಿಯಿಂದ ದೂರವಿದ್ದಾರೆ. ಅವರು ದುಡಿಯಲು ಪುತ್ರನೊಂದಿಗೆ ಮುಂಬೈಗೆ ಹೋಗಿದ್ದರು. ಬಾಲಕಿಗೆ ಮನೆಯಲ್ಲಿ ಆಶ್ರಯ ನೀಡಿದ್ದ ಆರೋಪಿ 18 ವರ್ಷ ತುಂಬಿದ ನಂತರ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ.
ಸಂತ್ರಸ್ತೆ ತಾಯಿ ದಸರಾ ಹಬ್ಬಕ್ಕೆ ಊರಿಗೆ ಬಂದಾಗ ಬಾಲಕಿಯನ್ನು ಮನೆಯಿಂದ ಕಳುಹಿಸಿದ ಆರೋಪಿ ಮದುವೆಯಾಗುವುದಿಲ್ಲವೆಂದು ಹೇಳಿದ್ದಾನೆ ಎನ್ನಲಾಗಿದೆ. ನಂತರ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
