HomeLatest NewsBREAKING NEWS: ಸುಪ್ರೀಂಕೋರ್ಟ್ ನಿರ್ದೇಶನ ಪ್ರಕಾರ ಒಳ ಮೀಸಲಾತಿ ಕಾಯ್ದೆ ಜಾರಿ: ಸಿಎಂ ಸಿದ್ಧರಾಮಯ್ಯ

BREAKING NEWS: ಸುಪ್ರೀಂಕೋರ್ಟ್ ನಿರ್ದೇಶನ ಪ್ರಕಾರ ಒಳ ಮೀಸಲಾತಿ ಕಾಯ್ದೆ ಜಾರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಸಿಎಂ ಮಾತುಗಳ ಸಾರಾಂಶ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್‌ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು.

ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ನಾವು ಸದಾ ಬದ್ಧರಿದ್ದು, ಈ ನಿಟ್ಟಿನಲ್ಲಿ ಒಳಮೀಸಲಾತಿ ಜಾರಿ ಒಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular