HomeLatest NewsBREAKING: ಬೆಳಗಿನ ಜಾವ ಸಾರಿಗೆ ಇಲಾಖೆ ಭರ್ಜರಿ ಕಾರ್ಯಾಚರಣೆ: ತೆರಿಗೆ ವಂಚನೆ, ಸುರಕ್ಷತಾ ವ್ಯವಸ್ಥೆ ಇಲ್ಲದ...

BREAKING: ಬೆಳಗಿನ ಜಾವ ಸಾರಿಗೆ ಇಲಾಖೆ ಭರ್ಜರಿ ಕಾರ್ಯಾಚರಣೆ: ತೆರಿಗೆ ವಂಚನೆ, ಸುರಕ್ಷತಾ ವ್ಯವಸ್ಥೆ ಇಲ್ಲದ 30 ಬಸ್ ಸೀಜ್

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿ ಬಸ್ ಅಗ್ನಿ ದುರಂತಕ್ಕೀಡಾದ ಹಿನ್ನೆಲೆ ಸಾರಿಗೆ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಇಂದು ಬೆಳ್ಳಂಬೆಳಗ್ಗೆ ಸಾರಿಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಟೋಲ್ ಸಮೀಪ ಬಸ್ ಗಳ ಪರಿಶೀಲನೆ ನಡೆಸಲಾಗಿದೆ. ಸಾರಿಗೆ ಇಲಾಖೆ ಅಪರ ಆಯುಕ್ತರಾದ ಓಂಕಾರೇಶ್ವರಿ ಹಾಗೂ ಸಾರಿಗೆ ಇಲಾಖೆ ಜಂಟಿ ಆಯುಕ್ತರಾದರೆ ಶೋಭಾ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.

ಸ್ಲೀಪರ್ ಕೋಚ್ ಬಸ್ ಗಳ ತೆರಿಗೆ ವಂಚನೆ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ 30 ಬಸ್ ಗಳನ್ನು ಸೀಜ್ ಮಾಡಲಾಗಿದೆ. ಮುಂಜಾನೆ 4 ಗಂಟೆಯಿಂದ 30ಕ್ಕೂ ಅಧಿಕ ಬಸ್ ಗಳನ್ನು ಸೀಜ್ ಮಾಡಲಾಗಿದೆ. ಬಸ್ ಗಳಲ್ಲಿದ್ದ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ. ದೇವನಹಳ್ಳಿಯಿಂದ ಮೆಜೆಸ್ಟಿಕ್ ವರೆಗೆ ಬಿಎಂಟಿಸಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular