ಬೀದರ್: ಆರ್.ಎಸ್.ಎಸ್. ಪಥಸಂಚಲನದಲ್ಲಿ ಗಣವೇಶ ಧರಿಸಿ ಕೈಯಲ್ಲಿ ದಂಡ ಹಿಡಿದು ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಅಕ್ಟೋಬರ್ 7 ಮತ್ತು 13 ರಂದು ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದ ಆರ್.ಎಸ್.ಎಸ್. ಪಥಸಂಚಲನದಲ್ಲಿ ಶಿಕ್ಷಕರು ಕೈಯಲ್ಲಿ ದಂಡ ಹಿಡಿದು ಭಾಗಿಯಾಗಿದ್ದರು. ಅವರಿಗೆ ಕಾರಣ ಕೇಳಿ ಕ್ಷೇತ್ರ ಶಿಕ್ಷಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.
ಶಿಕ್ಷಕರು ಆರ್.ಎಸ್.ಎಸ್. ಪಥಸಂಚಲನದಲ್ಲಿ ಭಾಗವಹಿಸಿದ್ದ ಬಗ್ಗೆ ದಲಿತ ಸೇನೆ ಮತ್ತು ಬಹುಜನ ಸೇವಾ ಸಮಿತಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕರಾದ ಮಹಾದೇವ್ ಚಿಟಗಿರೆ, ಶಾಲಿವಾನ್ ಉದಗಿರಿ, ಪ್ರಕಾಶ್ ಬರದಾಪುರೆ ಮತ್ತು ಸತೀಶ್ ಅವರಿಗೆ ಪ್ರತ್ಯೇಕವಾಗಿ ನೋಟಿಸ್ ಜಾರಿಗೊಳಿಸಲಾಗಿದೆ.
