HomeLatest NewsBREAKING : ಕರ್ನೂಲ್ ಅಗ್ನಿ ದುರಂತದ ಬೆನ್ನಲ್ಲೇ ಸಾರಿಗೆ ಇಲಾಖೆ ಅಲರ್ಟ್ : ಬೆಂಗಳೂರಲ್ಲಿ 30...

BREAKING : ಕರ್ನೂಲ್ ಅಗ್ನಿ ದುರಂತದ ಬೆನ್ನಲ್ಲೇ ಸಾರಿಗೆ ಇಲಾಖೆ ಅಲರ್ಟ್ : ಬೆಂಗಳೂರಲ್ಲಿ 30 ಖಾಸಗಿ ಬಸ್ ಸೀಜ್.!


ಬೆಂಗಳೂರು : ಕರ್ನೂಲ್ ಅಗ್ನಿ ದುರಂತದ ಬೆನ್ನಲ್ಲೇ ಸಾರಿಗೆ ಇಲಾಖೆ ಅಲರ್ಟ್ ಆಗಿದ್ದು, ಬೆಂಗಳೂರಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಸುರಕ್ಷತಾ ಕ್ರಮ ಉಲ್ಲಂಘಿಸಿದ 30 ಖಾಸಗಿ ಬಸ್ ಗಳನ್ನು ಸೀಜ್ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೋಲ್ ಬಳಿ ಬೆಳ್ಳಂ ಬೆಳಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಸಾರಿಗೆ ಇಲಾಖೆ ಅಪರ ಆಯುಕ್ತರಾದ ಓಂಕಾರೇಶ್ವರಿ ಹಾಗೂ ಸಾರಿಗೆ ಇಲಾಖೆ ಜಂಟಿ ಆಯುಕ್ತರಾದರೆ ಶೋಭಾ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.

ಸ್ವೀಪರ್ ಕೋಚ್ ಬಸ್ ಗಳ ತೆರಿಗೆ ವಂಚನೆ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ 30 ಬಸ್ ಗಳನ್ನು ಸೀಜ್ ಮಾಡಲಾಗಿದೆ. ಮುಂಜಾನೆ 4 ಗಂಟೆಯಿಂದ 30ಕ್ಕೂ ಅಧಿಕ ಬಸ್ ಗಳನ್ನು ಸೀಜ್ ಮಾಡಲಾಗಿದೆ. ಬಸ್ ಗಳಲ್ಲಿದ್ದ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ. ದೇವನಹಳ್ಳಿಯಿಂದ ಮೆಜೆಸ್ಟಿಕ್ ವರೆಗೆ ಬಿಎಂಟಿಸಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular