ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವೈರಲ್ ಫೀವರ್ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ರಾಜ್ಯಪಾಲರು ಚೇತರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ರಾಜ್ಯಪಾಲರು ಡಿಸ್ಚಾರ್ಜ್ ಆಗಲಿದ್ದಾರೆ.
