ಮಂಗಳೂರು: ಧರ್ಮಸ್ಥಳದ ವಿವಿಧೆಡೆಗಳಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹಂತದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಬುರುಡೆ ಗ್ಯಾಂಗ್ ಗೆ ಮತ್ತೆ ನೋಟಿಸ್ ಜಾರಿ ಮಾಡಿದ್ದಾರೆ.
ಬುರುಡೆ ಗ್ಯಾಂಗ್ ಗೆ ಕೆಲ ದಿನಗಳ ಹಿಂದೆ ನೋಟಿಸ್ ಜಾರಿ ಮಾಡಲಾಗಿತ್ತು. ಕೆಲ ಆರೋಪಿಗಳು ಎರಡು ದಿನಗಳ ಹಿಂದಷ್ಟೇ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಮತ್ತೊಮ್ಮೆ ಎಸ್ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ವಿಠಲಗೌಡಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಗಿರೀಶ್ ಮಟ್ಟೆಣ್ಣವರ್, ಟಿ.ಜಯಂತ್ ಗೆ ನವೆಂಬರ್ ೩ರಂದು ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
