BIG NEWS: ಲೈಬ್ರರಿಯನ್ ಆತ್ಮಹತ್ಯೆ ಪ್ರಕರಣ: PDO ಸಸ್ಪೆಂಡ್

ಬೆಂಗಳೂರು: ಪಂಚಾಯತ್ ಲೈಬ್ರರಿಯನ್ ರಾಮಚಂದ್ರಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ ಅವರನ್ನು ಅಮಾನತು ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರರಿಯನ್ ರಾಮಚಂದ್ರಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ತ್ಯಾಮಗೊಂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪಿಡಿಓ ಗೀತಾಮಣಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎಸ್, ಪಿಡಿಓ ಗೀತಾಮಣಿ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read