ಬೆಂಗಳೂರು: ಸಚಿವ ದಿನೇಶ್ ಗುಂದೂ ರಾವ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾ.ಕೆ.ಎಸ್.ಹೇಮಲೇಖಾ ಅವರಿದ್ದ ಹೈಕೋರ್ಟ್ ಪೀಠ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಗಾಂಧಿನಗರ ಕ್ಷೇತ್ರದಲ್ಲಿ ಕೇವಲ ೧೦೫ ಮತಗಳ ಅಂತರದಿಂದ ದಿನೇಶ್ ಗುಂಡೂರಾವ್ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿಯ ಸಪ್ತಗಿರಿ ಗೌಡ ಕ್ಷೇತ್ರದ ಮರು ಮತ ಎಣಿಕೆಗೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ನಿಖರ ಅಂಕಿ-ಅಂಶ ಸಲ್ಲಿಸದೇ ಮರು ಮತ ಎಣಿಕೆಗೆ ಕೋರಲಾಗಿದೆ ಎಂದು ದಿನೇಶ್ ಗುಂಡೂರಾವ್ ಪರ ವಕೀಲರು ವಾದ ಮಂಡಿಸಿದ್ದರು. ಚುನಾವಣಾ ತಕರಾರು ಅರ್ಜಿ ವಜಾಗೊಳಿಸುವಂತೆ ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸ್ದ ಹೈಕೋರ್ಟ್, ಮರು ಮತಎಣಿಕೆ ಅರ್ಜಿ ವವಾಗೊಳಿಸಿದೆ.

 
			 
		 
		 
		 
		 Loading ...
 Loading ... 
		 
		