ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ನಡೆಸಲು ಉದ್ದೇಸಿಸಿರುವ ಪಥಸಂಚಲನ ಪ್ರಕರಣ ಸಂಬಂಧ ಕೇಂದ್ರ ಗೃಹ ಇಲಾಖೆಯನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಅರ್ಜಿದಾರರು ಹೈಕೋರ್ಟ್ ನಲ್ಲಿ ಕೋರಿದ್ದಾರೆ.
ಚಿತ್ತಾಪುರದಲ್ಲಿ ನಡೆಸುವ ಆರ್.ಎಸ್.ಎಸ್ ಪಠಸಂಚಲನಕ್ಕೆ ಭದ್ರತೆ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯ ಪ್ರತಿವಾದಿಯನ್ನಾಗಿ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಕಳೆದಬಾರಿಯ ರಿಟ್ ಅರ್ಜಿ ವಿಚಾರಣೆ ವೇಳೆ ಅರ್ಜಿದಾರ ಚಿಂಚೋಳಿ ಹಿರಿಯ ನಾಗರಿಕ ಅಶೋಕ್ ಪಾಟೀಲ್, ಒಂದು ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯಸರ್ಕಾರಕ್ಕೆ ಕಷ್ಟವಾಗುತ್ತದೆ ಎಂದಾದರೆ ನಾವು ಕೇಂದ್ರದ ನೆರವು ಕೇಳುತ್ತೇವೆ ಎಂದಿದ್ದರು. ಇದೀಗ ಕೇಂದ್ರ ಗೃಹ ಇಲಾಖೆಯನ್ನು ಪ್ರತಿವಾದಿ ಮಾಡುವಂತೆ ಮನವಿ ಮಾಡಿದ್ದಾರೆ.

 
			 
		 
		 
		 
		 Loading ...
 Loading ... 
		 
		