ಬೆಂಗಳೂರು: ಉಡುಪಿ, ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಉಡುಪಿಯ ಅಂಜಾರು ಗ್ರಾಮದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ 20 ಸೆಂಟ್ಸ್ ಜಾಗ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಮಂಡ್ಯದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ 1457 ಚ.ಮೀ. ವಿಸ್ತೀರ್ಣದ ಜಾಗವನ್ನು 30 ವರ್ಷ ಲೀಸ್ ಗೆ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ.
ಕುಂದಾಪುರದಲ್ಲಿ 11 ಸೆಂಟ್ಸ್, ನೆಲಮಂಗಲದಲ್ಲಿ 00.08 ಗುಂಟೆ ಜಾಗವನ್ನು ಮಂಜೂರು ಮಾಡಿ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಶಹಾಪುರ ನಗರಸಭೆಯಲ್ಲಿ ಕನಕ ಭವನ ನಿರ್ಮಾಣಕ್ಕೆ 300 ಚ.ಮೀ. ಜಾಗ ಮಂಜೂರು ಮಾಡಲಾಗಿದೆ.
