ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್(KSRP) ಮತ್ತು ಭಾರತೀಯ ಮೀಸಲು ಪಡೆ(IRB) ಪೇದೆಗಳ ನೇಮಕಾತಿಗೆ ಕನಿಷ್ಠ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಯಿಂದ ಪಿಯುಸಿಗೆ ಹೆಚ್ಚಳ ಸೇರಿ ಕೆ.ಎಸ್.ಆರ್.ಪಿ. ಮತ್ತು ಐ.ಆರ್.ಬಿ. ವೃಂದ ಮತ್ತು ನೇಮಕಾತಿಯ ಕರಡು ನಿಯಮಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಮತ್ತು ಭಾರತೀಯ ಮೀಸಲು ದಳ ನೇಮಕಾತಿಗೆ ಇರುವ ವಿದ್ಯಾರ್ಹತೆಯನ್ನು ಎಸ್‌ಎಸ್‌ಎಲ್‌ಸಿಯಿಂದ ಪಿಯುಸಿಗೆ ಏರಿಕೆ ಮಾಡುವ ವೃಂದ ಮತ್ತು ನೇಮಕಾತಿ ನಿಯಮಕ್ಕೆ ಮಾಡಲಾದ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ.
ಸಂಪುಟ ಸಭೆಯ ಪಾಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಮಾಹಿತಿ ನೀಡಿ, ಆಕ್ಷೇಪಣೆಗಳನ್ನು ಆಹ್ವಾನಿಸಿ ಮೊದಲು ಪ್ರಕಟಿಸಬೇಕು. ಗಂಭೀರ ಆಕ್ಷೇಪಣೆಗಳು ಬಾರದಿದ್ದರೆ ಮತ್ತೊಮ್ಮೆ ಸಂಪುಟಕ್ಕೆ ವಿಷಯ ಮಂಡಿಸದೆ ಅಂತಿಮಗೊಳಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		