HomeLatest NewsBREAKING: ವಿವಾದಿತ ಮಸೀದಿಯಲ್ಲಿ ಅಕ್ರಮ ಮದರಸಾ ತೆರವಿಗೆ ಹಿಂದೂ ಸಂಘಟನೆಗಳ ಆಗ್ರಹ

BREAKING: ವಿವಾದಿತ ಮಸೀದಿಯಲ್ಲಿ ಅಕ್ರಮ ಮದರಸಾ ತೆರವಿಗೆ ಹಿಂದೂ ಸಂಘಟನೆಗಳ ಆಗ್ರಹ

ಮಂಡ್ಯ: ವಿವಾದಿತ ಜಾಮೀಯಾ ಮಸೀದಿಯಲ್ಲಿ ಅಕ್ರಮ ಮದರಸಾ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಕ್ರಮವಾಗಿ ನಡೆಯುತ್ತಿರುವ ಮದರಸಾ ತೆರವುಗೊಳಿಸಬೇಕೆಂದು ಒತ್ತಾಯಿಸಲಾಗಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ವಿವಾದಿತ ಜಾಮಿಯಾ ಮಸೀದಿಯಲ್ಲಿ ಮದರಸಾ ನಡೆಯುತ್ತಿದೆ. ಪುರಾತತ್ವ ಇಲಾಖೆಗೆ ಒಳಪಡುವ ಜಾಮೀಯಾ ಮಸೀದಿ ಇದಾಗಿದೆ. ಇದರಲ್ಲಿ ನಡೆಯುತ್ತಿರುವ ಮದರಸಾ ತೆರವಿಗೆ ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ.

ಸರ್ಕಾರದ ಹಣದಲ್ಲಿ ನಿರ್ವಹಣೆ ಮಾಡುತ್ತಿರುವ ಮದರಸಾಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಜಿಲ್ಲಾಡಳಿತದ ಅನುಮತಿ ಪಡೆಯದೆ ಮದರಸಾ ನಡೆಯುತ್ತಿದ್ದು, ತೆರವುಗೊಳಿಸಬೇಕೆಂದು ಒತ್ತಾಯಿಸಲಾಗಿದೆ. ಬಜರಂಗದಳ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗೆ ಈ ಕುರಿತಾಗಿ ಪತ್ರ ಬರೆಯಲಾಗಿದೆ. ಅಕ್ರಮ ಮದರಸಾ ತೆರವುಗೊಳಿಸದಿದ್ದರೆ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular