HomeLatest NewsBREAKING NEWS: ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿ ಇಬ್ಬರು ಬಲಿ

BREAKING NEWS: ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿ ಇಬ್ಬರು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ.

ಶೃಂಗೇರಿ ತಾಲೂಕಿನ ಕೆರೆಗದ್ದೆ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದೆ. ಬಿಜೆಪಿ ಮುಖಂಡ ಹರೀಶ್(47), ಉಮೇಶ್(44) ಮೃತಪಟ್ಟವರು ಎಂದು ಹೇಳಲಾಗಿದೆ. ಸೊಪ್ಪು ತರಲು ಮನೆಯ ಹಿಂಭಾಗ ತೆರಳಿದ್ದಾಗ ಕಾಡಾನೆ ದಾಳಿ ನಡೆಸಿದೆ. ಕೆರೆಕಟ್ಟೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೆರೆಗದ್ದೆಯ ಸಮೀಪ ಸೊಪ್ಪು ತರಲು ಹೋದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಹರೀಶ್, ಉಮೇಶ್ ಮೃತಪಟ್ಟಿದ್ದು, ಮೃತದೇಹಗಳ ಬಳಿಯೇ ಕಾಡಾನೆ ಇರುವುದರಿಂದ ಶವಗಳನ್ನು ಸಾಗಿಸಲು ತೊಂದರೆಯಾಗಿದೆ. ಮೃತದೇಹಗಳನ್ನು ಶೃಂಗೇರಿ ಆಸ್ಪತ್ರೆಗೆ ಸಾಗಿಸಲು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಸ್ಥಳದಲ್ಲಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಟ್ ವರ್ಕ್ ಸಿಗದ ಈ ಪ್ರದೇಶದಲ್ಲಿ ಕಾಡಾನೆ ಸಂಚರಿಸುತ್ತಿದ್ದು, ಮಾಹಿತಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ. ಅರಣ್ಯ ಸಚಿವರು ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular