HomeLatest NewsBREAKING : ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರು ಬಲಿ.!

BREAKING : ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರು ಬಲಿ.!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ.

ಶೃಂಗೇರಿ ತಾಲ್ಲೂಕಿನ ಕೆರೆಕಟ್ಟೆ ಸಮೀಪ ಕಾಡಾನೆ ತುಳಿದು ಇಬ್ಬರು ಮೃತಪಟ್ಟ ಘಟನೆ ಇಂದು ವರದಿಯಾಗಿದೆ. ಮೃತರನ್ನು ಬಿಜೆಪಿ ಮುಖಂಡ ಹರೀಶ್(47), ಉಮೇಶ್(44) ಎಂದು ಗುರುತಿಸಲಾಗಿದೆ.ಆಗುಂಬೆ ಭಾಗದಲ್ಲಿ ಸಂಚರಿಸುತ್ತಿದ್ದ ಕಾಡಾನೆಯಿಂದಲೇ ಈ ಘಟನೆ ನಡೆದಿದೆ ಎಂಬ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು , ಖಚಿತ ಮಾಹಿತಿ ಲಭ್ಯವಾಗಿಲ್ಲ. ಅಥವಾ ಶೃಂಗೇರಿ ಭಾಗದಿಂದ ಬೇರೆ ಆನೆಯೊಂದು ಬಂದಿದೆಯೋ ಎಂಬ ಬಗ್ಗೆ ಖಚಿತ ಮಾಹಿತಿಗಳು ಹೊರಬೀಳಬೇಕಿದೆ.

ಸೊಪ್ಪು ತರಲು ಮನೆಯ ಹಿಂಭಾಗ ತೆರಳಿದ್ದಾಗ ಕಾಡಾನೆ ದಾಳಿ ನಡೆಸಿದೆ. ಕೆರೆಕಟ್ಟೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತದೇಹಗಳ ಬಳಿಯೇ ಕಾಡಾನೆ ಇರುವುದರಿಂದ ಶವಗಳನ್ನು ಸಾಗಿಸಲು ತೊಂದರೆಯಾಗಿದೆ. ಮೃತದೇಹಗಳನ್ನು ಶೃಂಗೇರಿ ಆಸ್ಪತ್ರೆಗೆ ಸಾಗಿಸಲು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಸ್ಥಳದಲ್ಲಿದ್ದಾರೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular