ದಾವಣಗೆರೆ : ದಾವಣಗೆರೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ 8 ಜನರು ಗಾಯಗೊಂಡ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ಈ ಘಟನೆ ನಡೆದಿದೆ. 8 ಮಂದಿ ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.ನೂರ್, ಶಮೀವುಲ್ಲಾ, ಗುರುರಾಜ್, ಖಾದರ್ ಸ್ಥಿತಿ ಗಂಭೀರವಾಗಿದೆ.
8 ಮಂದಿ ಬೆಂಗಳೂರಿನಿಂದ ಗಂಗಾವತಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಕಾರು ಏಕಾಏಕಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
