ಬೆಂಗಳೂರು : ಅಲೆಮಾರಿ ಸಮುದಾಯಗಳಿಗೆ ಶೇಕಡ 1ರಷ್ಟು ಮೀಸಲಾತಿ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗದ ಜೊತೆಗಿನ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ಸಿಪಿ /ಟಿಎಸ್ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ. ಪ್ರತಿಯೊಬ್ಬರಿಗೂ ನ್ಯಾಯ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸುತ್ತೇವೆ. ಒಳಮೀಸಲಾತಿ ಕಲ್ಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಈಗ ಉಂಟಾಗಿರುವ ಗೊಂದಲಗಳಿಗೂ ಆದ್ಯತೆ ಮೇರೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.
ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು.
— Siddaramaiah (@siddaramaiah) October 31, 2025
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ಸಿಪಿ /ಟಿಎಸ್ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ.… pic.twitter.com/EYz7VR2b1E
