HomeLatest Newsದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್ಯ ಮಹಿಳಾ ನಿಲಯದ ಮೂವರು ಯುವತಿಯರು: ಉಡುಗೊರೆ ನೀಡಿ ಶುಭ ಹಾರೈಸಿದ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್ಯ ಮಹಿಳಾ ನಿಲಯದ ಮೂವರು ಯುವತಿಯರು: ಉಡುಗೊರೆ ನೀಡಿ ಶುಭ ಹಾರೈಸಿದ ಗಣ್ಯರು

ದಾವಣಗೆರೆ: ರಾಜ್ಯ ಮಹಿಳಾ ನಿಲಯದಲ್ಲಿ ಶುಕ್ರವಾರ ಮೂವರು ಮಹಿಳಾ ನಿವಾಸಿಗಳಾದ ಶಾಲಿನಿ(28), ರಕ್ಷಿತಾ.ಟಿ.(21) ಮತ್ತು ರುಚಿತಾ ಎ.(24) ಆವರಿಗೆ ಬದುಕು ಕಟ್ಟಿಕೊಡಲು ಮೂವರು ಯುವಕರು ಮುಂದಾಗಿದ್ದು, ಮೂವರು ನೂತನ ವಧು, ವರರ ವಿವಾಹ ಮಹೋತ್ಸವ ಸಮಾರಂಭಕ್ಕೆ ಮಹಿಳಾ ನಿಲಯ ಸಾಕ್ಷಿಯಾಯಿತು.

ವಿವಾಹಕ್ಕಾಗಿ ಶ್ರೀ ರಾಮನಗರದಲ್ಲಿರುವ ಮಹಿಳಾ ನಿಲಯವು ತಳಿರು ತೋರಣದಿಂದ ರಂಗೋಲಿಯಿಂದ ಕಂಗೊಳಿಸುತ್ತಿತ್ತು. ನಿಲಯದ ತುಂಬೆಲ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಮಹಿಳಾ ನಿಲಯದ ನಿವಾಸಿಗಳು, ಅವರ ಬಂಧುಗಳು ರೇಷ್ಮೆ ಸೀರೆಯುಟ್ಟು ಮದುವೆಯ ಮನೆ ತುಂಬ ಓಡಾಡುತ್ತಾ ಸಂಭ್ರಮದಿಂದ ಮದುವೆಯಾಚರಣೆಯಲ್ಲಿ ತೊಡಗಿದ್ದ ದೃಶ್ಯ ಕಂಡು ಬಂದಿತು.

ಮದುವೆ ಚಪ್ಪರ, ಸ್ವಾಗತ ದ್ವಾರ ನಿರ್ಮಿಸಲಾಗಿತ್ತು. ಅಮಂತ್ರಿತರಿಗೆ ಗುಲಾಬಿ ಹೂ ನೀಡುವುದರೊಂದಿಗೆ ಸ್ವಾಗತಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ರಾಜಾನಾಯ್ಕ ಅವರ ಸಂಪೂರ್ಣ ಮೇಲುಸ್ತುವಾರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಘಟಕಗಳು, ಮಹಿಳಾ ನಿಲಯದ ಅಧಿಕಾರಿ, ಸಿಬ್ಬಂದಿಗಳು ತಮ್ಮ ಸ್ವಂತ ಮಕ್ಕಳ ಮದುವೆ ಸಮಾರಂಭವೆಂಬಂತೆ ಅಚ್ಚುಕಟ್ಟಾಗಿ ಮತ್ತು ಸಂಭ್ರಮದಿಂದ ಈ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಶ್ರೀ ರಾಮನಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ರಾಜ್ಯ ಮಹಿಳಾ ನಿಲಯದ ನಿವಾಸಿಗಳಾದ ಶಾಲಿನಿ ಇವರೊಂದಿಗೆ ನಾಗರಾಜ, ಇಬ್ಬರಿಬ್ಬರೂ ಶ್ರವಣ ಹಾಗೂ ವಾಕ್ ದೋಷವುಳ್ಳವರಾಗಿರುತ್ತಾರೆ. ರಕ್ಷಿತಾ.ಟಿ ಇವರೊಂದಿಗೆ ಬಸವರಾಜ್, ರುಚಿತಾ ಇವರೊಂದಿಗೆ ಪ್ರವೀಣ ಇವರ ವಿವಾಹ ಮಹೋತ್ಸವವು ಅ.31 ರಂದು ಬೆಳಿಗ್ಗೆ 7.30 ರಿಂದ 10.30 ರವರೆಗೆ ದಾವಣಗೆರೆಯ ರಾಜ್ಯ ಮಹಿಳಾ ನಿಲಯದಲ್ಲಿ ನೆರವೇರಿತು.

ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಮಾರ್ಗದರ್ಶನದಲ್ಲಿ ಇಂದು ಮಹಿಳಾ ನಿಲಯದ ಶಾಲಿನಿ, ರಕ್ಷಿತಾ.ಟಿ, ಮತ್ತು ರುಚಿರಾ.ಎ ಎಂಬ ನಮ್ಮ ಮೂವರು ಹೆಣ್ಣು ಮಕ್ಕಳಿಗೆ ಧಾರೆ ಎರೆದು ಕೊಟ್ಟಿರುವುದು ಬಹಳಷ್ಟು ಅರ್ಥ ಪೂರ್ಣವಾದ ಕಾರ್ಯ. ಶಾಶ್ವತವಾಗಿ ನೆನಪಿಟ್ಟುಕೊಳ್ಳುವ ಸಂಭ್ರಮವಾಗಿದೆ.

ರಾಜ್ಯ ಮಹಿಳಾ ನಿಲಯ ಸಂಸ್ಥೆಯಲ್ಲಿ ಈಗ ಹಾಲಿ 45 ನಿವಾಸಿಗಳು ಇದ್ದು, ಇಲ್ಲಿಯವರೆಗೆ ಸಂಸ್ಥೆಯಲ್ಲಿ 46 ವಿವಾಹವನ್ನು ಇಲಾಖೆಯ ನಿಯಮಾನುಸಾರ ವರದಿ ಪಡೆದುಕೊಂಡಿರುತ್ತಾರೆ. ಈ ಹಿಂದೆ ನಡೆದ ವಿವಾಹ ಮಹಿಳೆಯರು ತಮ್ಮ ಸಂಸಾರದೊಂದಿಗೆ ಸುಖ ಜೀವನವನ್ನು ನಡೆಸುತ್ತಿದ್ದಾರೆ.

 ಈ ಶುಭ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ವೇಲಾ ಡಿ.ಕೆ, ನ್ಯಾಯಾಧೀಶರು ಹಾಗೂ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಡಿಹೆಚ್‌ಒ ಡಾ ಷಣ್ಮುಖಪ್ಪ, ಮಹಿಳಾ ನಿಲಯದ ಅಧೀಕ್ಷಕಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ನೂರಾರು ಮಂದಿ ಆಶೀರ್ವದಿಸಿದರು. ಆಮಂತ್ರಿತರು ವಧು ವರರಿಗೆ ಉಡುಗೊರೆಗಳನ್ನು ನೀಡಿ ಹರಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular