HomeLatest Newsನ.3 ರಿಂದ ಪುರಾತತ್ವ ಇಲಾಖೆಯ ಬೆಂಗಳೂರಿನ ವೆಂಕಟಪ್ಪ ಚಿತ್ರಶಾಲೆ ಕಲಾವಿದರು, ಸಾರ್ವಜನಿಕರ ಕಲಾ ಪ್ರದರ್ಶನಕ್ಕೆ ಮುಕ್ತ

ನ.3 ರಿಂದ ಪುರಾತತ್ವ ಇಲಾಖೆಯ ಬೆಂಗಳೂರಿನ ವೆಂಕಟಪ್ಪ ಚಿತ್ರಶಾಲೆ ಕಲಾವಿದರು, ಸಾರ್ವಜನಿಕರ ಕಲಾ ಪ್ರದರ್ಶನಕ್ಕೆ ಮುಕ್ತ

ಬೆಂಗಳೂರು: ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ವೆಂಕಟಪ್ಪ ಚಿತ್ರಶಾಲೆಯು ನ.3ರಿಂದ ಕಲಾವಿದರು ಮತ್ತು ಸಾರ್ವಜನಿಕರ ಕಲಾ ಪ್ರದರ್ಶನಕ್ಕೆ ಮುಕ್ತವಾಗಲಿದೆ.

ಕಟ್ಟಡ ನವೀಕರಣದ ಕಾರಣ ವೆಂಕಟಪ್ಪ ಚಿತ್ರಶಾಲೆಯಲ್ಲಿ ಕಲಾ ಪ್ರದರ್ಶನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಆಧುನಿಕ ತಂತ್ರಜ್ಞಾನಕ್ಕೆ ಅನುಗುಣವಾಗಿ ಕಟ್ಟಡವನ್ನು ನವೀಕರಣಗೊಳಿಸಲಾಗಿದ್ದು, ಚಿತ್ರಶಾಲೆಯ ಒಂದು ಸುಸಜ್ಜಿತ ಸಭಾಂಗಣ, ಪ್ರತ್ಯೇಕ ಮೂರು ಗ್ಯಾಲರಿಗಳು ಮತ್ತು ಚಿತ್ರಶಾಲೆಯ ಹೊರಾಂಗಣ ಸ್ಥಳಗಳನ್ನು ಬಾಡಿಗೆಗೆ ನೀಡಲಾಗುತ್ತದೆ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಆನ್‍ಲೈನ್ ಬುಕ್ಕಿಂಗ್ ವ್ಯವಸ್ಥೆ ಬಗ್ಗೆ ಸಿದ್ಧತೆ ನಡೆಯುತ್ತಿದ್ದು, ಸದ್ಯದಲ್ಲಿಯೇ ಅಂತಿಮಗೊಳ್ಳಲಿದೆ. ಅಲ್ಲಿಯವರೆಗೆ ಆಸಕ್ತ ಕಲಾವಿದರು, ಸಾರ್ವಜನಿಕರು ಹಾಗೂ ಖಾಸಗಿ ಕಾರ್ಪೊರೇಟ್ ಸಂಸ್ಥೆಗಳು ವೆಂಕಟಪ್ಪ ಚಿತ್ರಶಾಲೆಗೆ ಭೇಟಿ ನೀಡಿ, ಗ್ಯಾಲರಿಗಳನ್ನು ಕಾಯ್ದಿರಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಎಲ್.ಗೌಡ ಅವರ 8105001151 ಕರೆ ಮಾಡಿ ಅಥವಾ ಇ ಮೇಲ್ ವಿಳಾಸ [email protected] ಮೂಲಕವೂ ಸಂಪರ್ಕಿಸಬಹುದು ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular