HomeLatest Newsಸರ್ಕಾರದ ಎಲ್ಲಾ ಕಚೇರಿ, ಸಭೆ ಸಮಾರಂಭಗಳಲ್ಲಿ ಕೆಎಂಎಫ್ ‘ನಂದಿನಿ’ ತಿನಿಸು ಕಡ್ಡಾಯ: ಪ್ಲಾಸ್ಟಿಕ್ ಬದಲಾಗಿ ಪರಿಸರ...

ಸರ್ಕಾರದ ಎಲ್ಲಾ ಕಚೇರಿ, ಸಭೆ ಸಮಾರಂಭಗಳಲ್ಲಿ ಕೆಎಂಎಫ್ ‘ನಂದಿನಿ’ ತಿನಿಸು ಕಡ್ಡಾಯ: ಪ್ಲಾಸ್ಟಿಕ್ ಬದಲಾಗಿ ಪರಿಸರ ಸ್ನೇಹಿ ವಸ್ತು ಬಳಕೆಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಸರ್ಕಾರದ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬದಲಾಗಿ ಪರಿಸರ ಸ್ನೇಹಿ ವಸ್ತು ಬಳಕೆಗೆ ಮತ್ತು ಕೆಎಂಎಫ್ ‘ನಂದಿನಿ’ ತಿನಿಸು ಬಳಕಗೆ ಸಿಎಂ ಸಿದ್ಧರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ, ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular