ಬೆಂಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಮಧ್ಯರಾತ್ರಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ಕಾರ್ಯಕರ್ತರಿಂದ ಅದ್ದೂರಿ ಸಂಭ್ರಮಾಚರಣೆ, ಸಿಡಿಮದ್ದು ಪ್ರದರ್ಶನ ನಡೆಸಲಾಗಿದೆ.
ಕನ್ನಡ ಧ್ವಜಗಳ ಹಾರಾಟ, ಡಿಜೆ ಹಾಡುಗಳಿಗೆ ಯುವಕರು ಕುಣಿದು ಕುಪ್ಪಳಿಸಿದ್ದಾರೆ. ಇಂದು ಮಧ್ಯರಾತ್ರಿವರೆಗೂ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ ನಡೆಯಲಿದೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಯುವಪಡೆ ಕನ್ನಡ ಹಾಡುಗಳಿಗೆ ಕುಣಿದು ಕುಪ್ಪಳಿಸಿದ್ದಾರೆ. ಅಹಿತಕರ ಘಟನೆ ನಡೆದಂತೆ ಬೆಳಗಾವಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸಾಧಕರಿಗೆ ಪ್ರಶಸ್ತಿ ಪ್ರದಾನ
ಇಂದು ರಾಜ್ಯದ್ಯಂತ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಇಂದು ಪ್ರದಾನ ಮಾಡಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 70 ಗಣ್ಯರಿಗೆ, ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಜೆ 6.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
