ಡಿಸಿಎಂ ಡಿಕೆ ಮೇಲಿನ ಅಭಿಮಾನ ಪ್ರದರ್ಶಿಸಿದ ಕಾಂಗ್ರೆಸ್ ಶಾಸಕನ ಪುತ್ರನಿಗೆ ‘ಶಿವಕುಮಾರ್’ ಎಂದು ನಾಮಕರಣ

ಬೆಂಗಳೂರು: ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮೇಲಿನ ಅಭಿಮಾನ ಪ್ರದರ್ಶಿಸಿದ್ದು. ತಮ್ಮ ಪುತ್ರನಿಗೆ ‘ಶಿವಕುಮಾರ್’ ಎಂದು ಡಿ.ಕೆ. ಶಿವಕುಮಾರ್ ಅವರ ಮೂಲಕವೇ ನಾಮಕರಣ ಮಾಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನನ್ನ ಗೃಹ ಕಚೇರಿಯಲ್ಲಿ ಶುಕ್ರವಾರ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಮಗನಿಗೆ ಶಿವಕುಮಾರ್ ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ನಡೆಗೆ ನಾನು ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ.

“ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!

ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ “ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read