HomeLatest NewsBREAKING: ‘ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಪ್ರಧಾನಿ ಮೋದಿ ಶುಭಾಶಯ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಅವರಿಂದಲೂ...

BREAKING: ‘ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಪ್ರಧಾನಿ ಮೋದಿ ಶುಭಾಶಯ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಅವರಿಂದಲೂ ನಾಡಬಂಧುಗಳಿಗೆ ಶುಭಾಶಯ

70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. ಅದೇ ರೀತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ತಿಳಿಸಿದ್ದಾರೆ.

ಪ್ರಧಾನಿ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ಧರಾಮಯ್ಯ

ಸಿಎಂ ಸಿದ್ಧರಾಮಯ್ಯ ಅವರು ಶುಭಾಶಯ ಕೋರಿದ್ದು, ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ.

ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ. ನಾಡಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಜೈ ಭುವನೇಶ್ವರಿ, ಜೈ ಕರ್ನಾಟಕ  ಎಂದು ತಿಳಿಸಿದ್ದಾರೆ.

 ಡಿಸಿಎಂ ಡಿ.ಕೆ. ಶಿವಕುಮಾರ್

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದು, ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ, ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಾಶಯಗಳು. ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವನ್ನು ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ನಿತ್ಯ ಬಳಸಿ, ಅದನ್ನು ಇನ್ನಷ್ಟು ಉತ್ತುಂಗಕ್ಕೇರಿಸುವ ಕಾರ್ಯ ನಮ್ಮೆಲ್ಲರ ಪರಮ ಕರ್ತವ್ಯ. ಎಲ್ಲರ ನುಡಿಯಾಗಲಿ ಕನ್ನಡ, ಎಲ್ಲರ ನಡೆಯಾಗಲಿ ಕನ್ನಡ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular