ಬೆಳಗಾವಿ: ಬೆಳಗಾವಿಯಲ್ಲಿ ಒಂದೆಡೆ ಕನ್ನಡ ರಾಜ್ಯೋತ್ಸವದ ಸಡಗರ ಸಂಭ್ರಮ ಮನೆ ಮಾಡಿದ್ದರೆ, ಮತ್ತೊಂದೆಡೆ ನಾಡದ್ರೋಹಿ ಎಂಇಎಸ್ ಪುಂಡರು ನಿಷೇಧದ ನಡುವೆಯೂ ಕರಾಳದಿನ ಆಚರಣೆ ಮಾಡಿದ್ದಾರೆ.
ರಾಜ್ಯೋತ್ಸವದ ದಿನದಂದು ಕರಾಳದಿನ ಆಚರಿಸಲು ಎಂಇಎಸ್ ಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ನಿಷೇಧದ ನಡುವೆಯೂ ಎಂಇಎಸ್ ಪುಂಡರು ಕರಾಳದಿನ ಆಚರಣೆ ಮಾಡಿದ್ದಲ್ಲದೇ, ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ಮೆರವಣಿಗೆ ನಡೆಸಿದ್ದಾರೆ. ಮೆರವಣಿಗೆಗೆ ಬೆಳಗಾವಿ ಪೊಲೀಸರು ಭದ್ರತೆ ಒಡಗಿಸಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನದಂದು ಕರಾಳದಿನ ಆಚರಿಸಲು ಬೆಳಗಾವಿಗೆ ಬಂದ ಎಂಇಎಸ್ ಮುಖಂಡರ ಜೊತೆ ಪೊಲೀಸ್ ಅಧಿಕಾರಿಯೇ ಸೆಲ್ಫಿ ತೆಗೆದುಕೊಂಡಿರುವ ಘಟನೆ ನಡೆದಿದೆ.
ಕರಾಳದಿನಾಚರಣೆಯ ಬಂದೋಬಸ್ತಕ್ಕೆ ಹೋಗಿದ್ದ ಬೆಳಗಾವಿಯ ಮಾಳಮಾರುತಿ ಠಾಣೆ ಸಿಪಿಐ ಜೆ.ಎಂ.ಕಾಲೆಮಿರ್ಚೆ, ಎಂಇಎಸ್ ಮುಖಂಡ ಶುಭಂ ಸೇಳಕೆ ಜೊತೆಗೆ ನಿಂತು ತಾವೇ ಮೊಬೈಲ್ ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯ ಈ ನಡೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
