HomeLatest Newsಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ, ತಲೆಯ ಮೇಲೆ ಬಂದೂಕು ಹಿಡಿದು ಯಾರನ್ನೂ ಉಳಿಸಿಕೊಳ್ಳಲು ಸಾಧ್ಯವಿಲ್ಲ: ಬಿಜೆಪಿ ನಾಯಕ...

ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ, ತಲೆಯ ಮೇಲೆ ಬಂದೂಕು ಹಿಡಿದು ಯಾರನ್ನೂ ಉಳಿಸಿಕೊಳ್ಳಲು ಸಾಧ್ಯವಿಲ್ಲ: ಬಿಜೆಪಿ ನಾಯಕ ಅಣ್ಣಾಮಲೈ ಸ್ಪೋಟಕ ಹೇಳಿಕೆ

ಕೊಯಮತ್ತೂರು: ಹೊಸ ಪಕ್ಷ ಆರಂಭಿಸುವ ಕುರಿತಾದ ವದಂತಿಗಳನ್ನು ತಳ್ಳಿ ಹಾಕಿರುವ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಪಕ್ಷದೊಳಗಿನ ಕೆಲವು ವಿಚಾರಗಳಲ್ಲಿ ಅಸಮಾಧಾನ ಇರುವುದನ್ನು ಒಪ್ಪಿಕೊಂಡಿದ್ದಾರೆ.

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ನಾನು ಇಷ್ಟವಿದ್ದರೆ ಪಕ್ಷದಲ್ಲಿ ಇರುತ್ತೇನೆ. ಬೇಡವೆನಿಸಿದರೆ ಕೃಷಿ ಮಾಡುತ್ತೇನೆ. ರಾಜಕೀಯ ಸ್ವಯಂಪ್ರೇರಿತ ಕ್ಷೇತ್ರವಾಗಿದ್ದು, ಇಲ್ಲಿ ನಮ್ಮ ಹಣವನ್ನೇ ನಾವು ಖರ್ಚು ಮಾಡುತ್ತೇವೆ. ತಲೆಯ ಮೇಲೆ ಬಂದೂಕು ಹಿಡಿದು ಯಾರನ್ನೂ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಸ್ವಚ್ಛ ರಾಜಕೀಯ ತರುವರು ಎನ್ನುವ ವಿಶ್ವಾಸವೇ ನಾನು ಬಿಜೆಪಿಗೆ ಸೇರಲು ಕಾರಣ. ಆ ನಂಬಿಕೆ ಇಲ್ಲದಿದ್ದರೆ ನಾನು ಉದ್ಯೋಗ ಬಿಟ್ಟು ರಾಜಕೀಯಕ್ಕೆ ಬರಬೇಕಾದ ಅಗತ್ಯವೇ ಇರಲಿಲ್ಲ. ರಾಜಕೀಯ ಹಿನ್ನೆಲೆ ಇಲ್ಲದ ಕೃಷಿಕ ಕುಟುಂಬದಿಂದ ಬಂದ ನನಗೆ ನನ್ನ ಇತಿಮಿತಿಗಳು ಗೊತ್ತಿವೆ. ಹೊಸ ಪಕ್ಷ ಪ್ರಾರಂಭಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವೊಮ್ಮೆ ಆತ್ಮಸಾಕ್ಷಿಗೆ ವಿರುದ್ಧವಾಗಿ ಮಾತನಾಡಬೇಕಾಗುತ್ತದೆ. ಆದರೂ ಕೆಲವು ವಿಷಯಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಕಾದು ನೋಡೋಣ ಒಳ್ಳೆಯದಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular