HomeLatest Newsಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಇಂದಿನಿಂದ ‘ಅನ್ನ ಸುವಿಧಾ ಯೋಜನೆ’ ಜಾರಿ: ಮನೆ ಬಾಗಿಲಿಗೆ ರೇಷನ್

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಇಂದಿನಿಂದ ‘ಅನ್ನ ಸುವಿಧಾ ಯೋಜನೆ’ ಜಾರಿ: ಮನೆ ಬಾಗಿಲಿಗೆ ರೇಷನ್

ಅನ್ನ ಸುವಿಧಾ ಯೋಜನೆಯು ರಾಜ್ಯಾದ್ಯಂತ ನ. 01 ರಿಂದ ಅನುಷ್ಠಾನಗೊಳ್ಳಲಿದ್ದು, 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನ ಸುವಿಧಾ ಮಾಡ್ಯೂಲ್‌ನ ಮೂಲಕ ಅರ್ಹ ಫಲಾನುಭವಿಗಳ ಮನೆಯ ಬಾಗಿಲಿಗೆ ಪಡಿತರವನ್ನು ವಿತರಣೆ ಮಾಡಲಾಗುವುದು.

ಈ ಸಂಬಂಧ ಪ್ರತಿ ಮಾಹೆಯ ದಿನಾಂಕ 30 ಅಥವಾ 31 ನೇ ತಾರೀಖಿನಂದು ಗುರುತಿಸಲಾದ ಫಲಾನುಭವಿಗಳಿಗೆ SMS ಗಳನ್ನು ಕಳುಹಿಸಲಾಗುವುದು. ಅರ್ಹ ಫಲಾನುಭವಿಗಳು ಆಯಾ ತಿಂಗಳ ದಿನಾಂಕ 1 ರಿಂದ 5 ನೇ ತಾರೀಖಿನೊಳಗೆ ಅವರ ನ್ಯಾಯಬೆಲೆ ಅಂಗಡಿಯಲ್ಲಿ ಮನೆಯ ಬಾಗಿಲಿಗೆ ಪಡಿತರವನ್ನು ಪಡೆಯಲು ನೋಂದಾಯಿಸಿಕೊಳ್ಳತಕ್ಕದ್ದು.

ನೋಂದಾಯಿತ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಆಯಾ ತಿಂಗಳ 6 ರಿಂದ 15ನೇ ತಾರೀಖಿನೊಳಗಾಗಿ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಿಂದ ಪಡಿತರವನ್ನು ಪೂರೈಸಲಾಗುವುದು. ಅರ್ಹ ಫಲಾನುಭವಿಗಳು ಸದರಿ ಅನ್ನ ಸುವಿಧಾ ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular