ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಇಎಸ್) ನಾಯಕರು ಪ್ರತಿ ವರ್ಷ ಸಮಾವೇಶದ ಹೆಸರಲ್ಲಿ ಅನುಮತಿ ಪಡೆಯುತ್ತಿದ್ದಾರೆ. ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಎಂಇಎಸ್ ನಿಷೇಧಿಸುವ ಬಗ್ಗೆ ಚಿಂತಿಸಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಇಎಸ್ ನಾಯಕರು ಕನ್ನಡ ವಿರೋಧಿ ಚಟುವಟಿಕೆ ನಡೆಸಿದರೆ ಆ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ,
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾಡಳಿತದ ಅನುಮತಿ ಪಡೆದುಕೊಳ್ಳದೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಕರಾಳ ದಿನ ಆಚರಿಸಿದ್ದಾರೆ. ಅನುಮತಿ ನೀಡುವುದಿಲ್ಲವೆಂದು ಹೇಳಿದ್ದ ಜಿಲ್ಲಾಡಳಿತ ಕಾರ್ಯಕರ್ತರಿಗೆ ಪೊಲೀಸ್ ಭದ್ರತೆ ಒದಗಿಸಿತ್ತು.
