HomeLatest Newsಜ್ಞಾನಪೀಠ, ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿನ ಅಭಿವೃದ್ಧಿಗೆ ತಲಾ 1 ಕೋಟಿ ರೂ. ಘೋಷಣೆ

ಜ್ಞಾನಪೀಠ, ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿನ ಅಭಿವೃದ್ಧಿಗೆ ತಲಾ 1 ಕೋಟಿ ರೂ. ಘೋಷಣೆ

ಕಲಬುರಗಿ: ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಕನ್ನಡದ ಮಹನೀಯರ ಹುಟ್ಟೂರಿನ ಅಭಿವೃದ್ಧಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ತಲಾ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು, ದ.ರಾ. ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ವಿ.ಕೃ. ಗೋಕಾಕ್, ಯು.ಆರ್. ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ್ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಸರ್ ಎಂ. ವಿಶ್ವೇಶ್ವರಯ್ಯ, ಭೀಮಸೇನ್ ಜೋಶಿ ಆವರ ಹುಟ್ಟೂರುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಸಿಎನ್ಆರ್ ರಾವ್ ಅವರ ಹುಟ್ಟೂರು ಬೆಂಗಳೂರು ಆಗಿದ್ದು, ನಗರ ಪ್ರದೇಶವಾಗಿದ್ದರಿಂದ ಐಟಿ ಬಿಟಿ ಇಲಾಖೆಯಿಂದ ಅನುದಾನ ನೀಡಲಾಗುವುದು. ಸ್ಥಳೀಯರ ಬೇಡಿಕೆ ಮೇರೆಗೆ ಎರಡು ಮೂರು ತಿಂಗಳಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular