HomeLatest NewsBREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ವೇಳೆ ಕಳ್ಳರ ಕೈಚಳಕ: 300ಕ್ಕೂ ಅಧಿಕ ಮಂದಿ ಮೊಬೈಲ್ ಕಳವು

BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ವೇಳೆ ಕಳ್ಳರ ಕೈಚಳಕ: 300ಕ್ಕೂ ಅಧಿಕ ಮಂದಿ ಮೊಬೈಲ್ ಕಳವು

ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಕಳ್ಳರು ಕೈಚಳಕ ತೋರಿಸಿದ್ದು, 300ಕ್ಕೂ ಹೆಚ್ಚು ಮೊಬೈಲ್ ಕಳವು ಮಾಡಲಾಗಿದೆ.

ನಿನ್ನೆ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆ ಅವಧಿಯಲ್ಲಿ 300ಕ್ಕೂ ಅಧಿಕ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಸುತ್ತಮುತ್ತ ಮೆರವಣಿಗೆ ವೇಳೆಯಲ್ಲಿ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ. ಯುವಕರು, ಯುವತಿಯರನ್ನು ಟಾರ್ಗೆಟ್ ಮಾಡಿ ಕಳ್ಳರ ಗ್ಯಾಂಗ್ ಕೃತ್ಯ ಎಸಗಿದೆ.

ಆ್ಯಪ್ ಮೂಲಕ ಮೊಬೈಲ್ ಕಳೆದುಕೊಂಡವರು ದೂರು ಸಲ್ಲಿಸಿದ್ದಾರೆ. ದೂರಿನ ಪ್ರತಿಗೆ ಠಾಣೆಗೆ ಆಗಮಿಸಿ ಮೊಬೈಲ್ ಹುಡುಕಿಕೊಡಲು ಮನವಿ ಮಾಡಿಕೊಂಡಿದ್ದಾರೆ. ಬೆಳಗ್ಗೆಯಿಂದ 300ಕ್ಕೂ ಹೆಚ್ಚು ಜನರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳಗಾವಿಯ ಕಡೆ ಬಜಾರ್, ಮಾರ್ಕೆಟ್, ಕ್ಯಾಂಪ್ ಪೊಲೀಸ್ ಠಾಣೆಗಳಿಗೆ ದೂರು ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular