ಉಡುಪಿ: ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ ‘ಅಕ್ಕ’ ಪಡೆ ಆರಂಭಿಸಲಾಗುವುದು. ನವೆಂಬರ್ 19 ರಂದು ಬೆಂಗಳೂರಿನಲ್ಲಿ ‘ಅಕ್ಕ’ ಪಡೆಗೆ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಚಿವರು, ನವೆಂಬರ್ 19ರಂದು ಬೆಂಗಳೂರಿನಲ್ಲಿ ‘ಅಕ್ಕ’ ಪಡಕ್ಕೆ ಚಾಲನೆ ನೀಡಲಿದ್ದು, ನಂತರ ಮೈಸೂರು, ಉಡುಪಿ, ಮಂಗಳೂರು, ಬೆಳಗಾವಿಯಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅಂಗನವಾಡಿ ಪ್ರಾರಂಭವಾಗಿ 50 ವರ್ಷದ ಪೂರ್ಣಗೊಂಡಿದ್ದು ನವೆಂಬರ್ 19ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
