HomeLatest NewsBREAKING: ಯಾವ ನವೆಂಬರ್ ಕ್ರಾಂತಿಯೂ ಇಲ್ಲ, 2028ರವರೆಗೆ ಸಿದ್ಧರಾಮಯ್ಯ ಸಿಎಂ, ಅವರ ಬಳಿಕ ಡಿಕೆ ಮುಖ್ಯಮಂತ್ರಿಯಾಗಲಿ:...

BREAKING: ಯಾವ ನವೆಂಬರ್ ಕ್ರಾಂತಿಯೂ ಇಲ್ಲ, 2028ರವರೆಗೆ ಸಿದ್ಧರಾಮಯ್ಯ ಸಿಎಂ, ಅವರ ಬಳಿಕ ಡಿಕೆ ಮುಖ್ಯಮಂತ್ರಿಯಾಗಲಿ: ಜಮೀರ್ ಅಹಮ್ಮದ್

ಕೊಪ್ಪಳ: ಯಾವ ನವೆಂಬರ್ ಕ್ರಾಂತಿಯೂ ಇಲ್ಲ, 2028ರ ವರೆಗೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇರುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, 2028ರ ನಂತರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ. ಡಿ.ಕೆ. ಶಿವಕುಮಾರ್ ಪಕ್ಷಕ್ಕೆ ಶ್ರಮಪಟ್ಟಿದ್ದಾರೆ, ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಮುಖ್ಯಮಂತ್ರಿ ಆಗಬೇಕು ಎಂದು ನಮಗೂ ಆಸೆ ಇದೆ. ಡಿ.ಕೆ. ಶಿವಕುಮಾರ್ ಗೂ ಆಸೆ ಇದೆ. ಆದರೆ ಸಿದ್ದರಾಮಯ್ಯ ಅವಧಿ ಮುಗಿದ ನಂತರ ಡಿಕೆ ಮುಖ್ಯಮಂತ್ರಿ ಆಗಲಿ ಎಂದು ಹೇಳಿದ್ದಾರೆ

ಅಭಿಮಾನಿಗಳಿಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ. ನಮಗೂ ಆಸೆ ಇದೆ. ಸಿದ್ದರಾಮಯ್ಯ 2028ರ ವರೆಗೂ ಮುಖ್ಯಮಂತ್ರಿ ಆಗಿರುತ್ತಾರೆ. ನಂತರ ಡಿಕೆ ಮುಖ್ಯಮಂತ್ರಿ ಆಗಲಿ. ಈ ವಿಚಾರವನ್ನು ಡಿ.ಕೆ. ಶಿವಕುಮಾರ್ ಕೂಡ ಹೇಳಿದ್ದಾರೆ. ಸಿದ್ದರಾಮಯ್ಯ ಕೂಡಲ ದಸರಾ ಸಮಯದಲ್ಲಿ ಹೇಳಿದ್ದರು. ಈ ವಿಚಾರಕ್ಕೆ ಡಿ.ಕೆ. ಶಿವಕುಮಾರ್ ಕೂಡ ಸರಿ ಅಂದಿದ್ದಾರೆ ಎಂದು ಕೊಪ್ಪಳದಲ್ಲಿ ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular