ನವೀಮುಂಬೈ: ಭಾನುವಾರ ನವೀನ್ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗಳಿಸಿದೆ.
ಚೊಚ್ಚಲ ಐಸಿಸಿ ಏಕದಿನ ವಿಶ್ವ ಕಪ್ ಗೆದ್ದಿದೆ. ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ 52 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಮೂರು ಬಾರಿ ಏಕದಿನ ವಿಶ್ವ ಕಪ್ ಫೈನಲ್ ಗೇರಿದ್ದ ಭಾರತ ಮೊದಲ ಬಾರಿಗೆ ಕಿರೀಟ ತನ್ನದಾಗಿಸಿಕೊಂಡಿದೆ.
ದಕ್ಷಿಣ ಆಫ್ರಿಕಾ ಚೊಚ್ಚಲ ಕಪ್ ಗೆಲ್ಲುವ ಕನಸು ಭಗ್ನವಾಗಿದೆ. ಮಳೆಯಿಂದ 2 ಗಂಟೆ ವಿಳಂಬವಾಗಿ ಪಂದ್ಯ ಆರಂಭವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 298 ಗಳಿಸಿತು. ದಕ್ಷಿಣ ಆಫ್ರಿಕಾ 45.3 ಓವರ್ ಗಳಲ್ಲಿ 246 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲು ಕಂಡಿದೆ.
ಭಾರತದ ಪರ ಶೆಫಾಲಿ 87 ರನ್, ದೀಪ್ತಿ 58, ಸ್ಮೃತಿ 45, ರಿಚಾ 34, ಜೆಮಿಮಾ 24 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ಪರ ನಾಯಕಿ ಲಾರಾ ಹೊಲ್ವಾರ್ಟ್ 101, ಡರ್ಕ್ಶನ್ 35 ರನ್ ಗಳಿಸಿದರು. ಭಾರತದ ಪರ ದೀಪ್ತಿ ಶರ್ಮಾ ಐದು ವಿಕೆಟ್ ಕಬಳಿಸಿದರು.
𝐂.𝐇.𝐀.𝐌.𝐏.𝐈.𝐎.𝐍.𝐒 🏆
— BCCI Women (@BCCIWomen) November 2, 2025
Congratulations to #TeamIndia on winning their maiden ICC Women's Cricket World Cup 🇮🇳
Take. A. Bow 🙌#WomenInBlue | #CWC25 | #Final | #INDvSA pic.twitter.com/rYIFjasxmc
