ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ: ಅಧಿಕಾರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 70 ಲಕ್ಷ ರೂ. ದಂಡ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಯೊಬ್ಬರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 70 ಲಕ್ಷ ರೂಪಾಯಿ ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬಿಎಂಟಿಸಿ ವಿಭಾಗೀಯ ಸಂಚಾರ ನಿಯಂತ್ರಕ ಕೆ.ಬಿ. ರಾಮಕೃಷ್ಣ ರೆಡ್ಡಿ ಶಿಕ್ಷೆಗೆ ಗುರಿಯಾದವರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಡಿ 2014ನೇ ಸಾಲಿನಲ್ಲಿ ಕೆ.ಬಿ. ರಾಮಕೃಷ್ಣ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ನಂತರ ಪ್ರಕರಣದ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ರಾಮಕೃಷ್ಣ ರೆಡ್ಡಿ ಅವರು ಆದಾಯಕ್ಕಿಂತ 61.45 ಲಕ್ಷ ರೂ. ಮೌಲ್ಯದ ಅಧಿಕ ಆಸ್ತಿ ಹೊಂದಿರುವುದನ್ನು ಬಯಲು ಮಾಡಿದ್ದರು. ಈ ಸಂಬಂಧ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅ. 31ರಂದು ಕೆ.ಬಿ. ರಾಮಕೃಷ್ಣ ರೆಡ್ಡಿ ಅವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 70 ಲಕ್ಷ ರೂ. ದಂಡ ವಿಧಿಸಿ ಅಂತಿಮ ತೀರ್ಪು ನೀಡಿದೆ. ದಂಡ ಪಾವತಿಸುವಲ್ಲಿ ವಿಫಲರಾದರೆ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಉಲ್ಲೇಖಿಸಲಾಗಿದೆ. ಲೋಕಾಯುಕ್ತ ಪೊಲೀಸರ ಪರವಾಗಿ ಸರ್ಕಾರಿ ಅಭಿಯೋಜಕ ಮಂಜುನಾಥ ಹೊನ್ನಯ್ಯ ನಾಯಕ ಅವರು ವಾದ ಮಂಡಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read