ನವದೆಹಲಿ: ಬ್ಲೂಫಿಲಂಗೆ ನಿಷೇಧ ಹೇರಿದರೆ ನೇಪಾಳ ಮಾದರಿ ಜೆನ್ ಝೀ ದಂಗೆ ಆದೀತು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಅಶ್ಲೀಲ ವೆಬ್ಸೈಟ್ ನಿಷೇಧ ಕೋರಿದ ಅರ್ಜಿ ವಿಚಾರಣೆಯ ವೇಳೆ ನೇಪಾಳದಲ್ಲಿ ಏನಾಗಿದೆ ಎಂಬುದು ಗೊತ್ತಿದೆಯಲ್ಲ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಬ್ಲೂ ಫಿಲಂಗಳ ನಿಷೇಧ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾದ ಅರ್ಜಿಗೆ ಮನ್ನಣೆ ನೀಡಲು ಸುಪ್ರೀಂಕೋರ್ಟ್ ಹಿಂದೇಟು ಹಾಕಿದ್ದು, ನೇಪಾಳದಲ್ಲಿ ಸೋಷಿಯಲ್ ಮೀಡಿಯಾ ನಿಷೇಧದ ವಿರುದ್ಧ ಉಂಟಾಗಿದ್ದ ದ್ದಂಗೆಯನ್ನು ಉದಾಹರಣೆಯಾಗಿ ನೀಡಲಾಗಿದೆ. ನೇಪಾಳದಲ್ಲಿ ನಿಷೇಧ ಹೇರಲು ಯತ್ನಿಸಿದಾಗ ಏನಾಯಿತು ಎಂದು ಗೊತ್ತಿದೆಯಲ್ಲವೇ ಎಂದು ಹೇಳಿದೆ.
ಕೋವಿಡ್ ಸಮಯದ ನಂತರ 14 ರಿಂದ 18 ವರ್ಷದೊಳಗಿನ ಮಕ್ಕಳಿಂದ ಅಶ್ಲೀಲ ಚಿತ್ರ ವೀಕ್ಷಣೆ ಹೆಚ್ಚಳವಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ. ಹಲವು ದೇಶಗಳಲ್ಲಿ ನಿಷೇಧವಿದೆ. ಭಾರತದಲ್ಲಿಯೂ ನಿಷೇಧ ಹೇರಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ.
ಆನ್ಲೈನ್ ಕಂಟೆಂಟ್ ನಿಷೇಧವು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಪೋರ್ನ್ ಚಿತ್ರಗಳ ವೀಕ್ಷಣೆಯಿಂದ ವ್ಯಕ್ತಿ ವಿಶೇಷವಾಗಿ 13 ರಿಂದ 18ರ ಹರೆಯದವರು ಮತ್ತು ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿತ್ತು. ಅಂತಹ ದೃಶ್ಯಗಳು ಜನರಿಗೆ ಸುಲಭವಾಗಿ ಸಿಗುವುದನ್ನು ತಡೆಯಲು ಯಾವುದೇ ಕ್ರಮಗಳಿಲ್ಲ. ಅಶ್ಲೀಲ ಚಿತ್ರಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ನೀತಿ ರೂಪಿಸಬೇಕೆಂದು ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಪೀಠ, ಜಾಲತಾಣ ನಿಷೇಧದಿಂದ ನೇಪಾಳದಲ್ಲಿ ಏನಾಯಿತು ನೋಡಿ ಎಂದು ಜೆನ್ ಝೀ ದಂಗೆಯನ್ನು ಉಲ್ಲೇಖಿಸಿದ್ದಾರೆ.
ಆನ್ಲೈನ್ ಕಂಟೆಂಟ್ ನಿಯಂತ್ರಣ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದು, ವಿಚಾರಣೆಯನ್ನು ನಾಲ್ಕು ವಾರ ಮುಂದೂಡಲಾಗಿದೆ.
