ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿ ಅಂಚಟಗೇರಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜುನಲ್ಲಿ ಸಿ.ಬಿ.ಎಸ್.ಇ ವಿಜ್ಞಾನ ವಿಭಾಗಕ್ಕೆ ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಹತೆವುಳ್ಳ ಶಿಕ್ಷಕರು ನವೆಂಬರ್ 10, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2971590 ಮತ್ತು 8095923300 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
