HomeLatest NewsSHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ...

SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ.!

ಹಾಸನ : ರಾಜ್ಯದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಯುವತಿ ವಿಚಾರಕ್ಕೆ ಗ್ಯಾಂಗ್ ಒಂದು ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯ ವಲಯದಲ್ಲಿ ಈ ಘಟನೆ ನಡೆದಿದೆ. ಬಟ್ಟೆ ಬಿಚ್ಚಿ ಭರತ್ ಎಂಬ ಯುವಕನ ಮೇಲೆ ಗುಂಪು ಹಲ್ಲೆ ನಡೆಸಿದೆ. ಯುವತಿ ಹಾಗೂ ಹಣದ ವಿಚಾರಕ್ಕೆ ಯುವಕನನ್ನ ನಿರ್ಜನ ಪ್ರದೇಶಕ್ಕೆ ಕರೆತಂದು ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಲಾಗಿದೆ. ಅಲ್ಲದೇ ಯುವಕನ ಪ್ಯಾಂಟ್ ಕೂಡ ಬಿಚ್ಚಿಸುವಂತೆ ಒತ್ತಾಯಿಸಲಾಗಿದೆ. ಕೆಲವರು ಭರತ್ ಮೇಲೆ ಹಲ್ಲೆ ನಡೆಸುತ್ತಿದರೆ , ಕೆಲವರು ಈ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular