ಬೆಂಗಳೂರು : ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನರಾಗಿದ್ದು, ನಾಳೆ ಹುಟ್ಟೂರು ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ.
ಬಾಗಲಕೋಟೆಯ ತಿಮ್ಮಾಪುರ ಗ್ರಾಮದಲ್ಲಿ ಲಿಂಗಾಯತ ಸಮುದಾಯದ ಸಂಪ್ರದಾಯದಂತೆ ಮೇಟಿ ಅವರ ಅಂತ್ಯಕ್ರಿಯೆ ನಾಳೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.
ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ನಾಳೆ ಹುಟ್ಟೂರು ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ.
