ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಕೊಲೆ ನಡೆದಿದ್ದು, ಹಾಡಹಗಲೇ ಕತ್ತು ಕೊಯ್ದು ವ್ಯಕ್ತಿಯೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಂಗಳೂರಿನ ಕಿತ್ತಗಾನಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಪ್ರಾವಿಜನ್ ಸ್ಟೋರ್ ಮಾಲೀಕ ಮಾದೇಶ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಗನ್, ಚಾಕು ಸಮೇತ ಮಾದೇಶ್ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾದೇಶ್ ನ ಕತ್ತು ಕೊಯ್ದು ಎಸ್ಕೇಪ್ ಆಗಿದ್ದಾರೆ. ಹಾಡಹಗಲೇ ನಡೆದ ಕೊಲೆಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೆಬ್ಬಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
