ಬೆಳಗಾವಿ: ಕಬ್ಬು ದರ ನಿಗದಿ, ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕಬ್ಬು ಬೆಳೆಗಾರರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ತೀವ್ರಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಅಥಣಿಯಲ್ಲಿ ರೈತರು ಕನ್ನಡಪರ ಸಂಘಟನೆಗಳ ಬೆಂಬಲದೊಂದ್ಗೆ ಬಂದ್ ಗೆ ಕರೆ ನೀಡಿದ್ದಾರೆ. ಬೆಳಗಾವಿಯ ಚಿಕ್ಕೋಡಿ, ಅಥಣಿ, ಗುರ್ಲಾಪುರ, ಜಾಂಬೋಟಿ, ಗೋಕಾಕ್ ಸೇರಿದಂತೆ ವಿವಿಧಕಡೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಅಂಗಡಿ ಮಳಿಗೆಗಳು ಸ್ವಯಂ ಪ್ರೇರಿತವಾಗಿ ಮುಚ್ಚಲ್ಪಟ್ಟಿವೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣ ಸಂಪೂರ್ಣ ಬಂದ್ ಆಗಿದೆ.
ಅಡವಿಸಿದ್ದೇಶ್ವರ ಮಠದಿಂದ ಕೋರ್ಟ್ ವೃತ್ತದವರೆಗೆ ರೈತರು ಮೆರವಣಿಗೆ ನಡೆಸಿದ್ದು, ಬಳಿಕ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ರ್ಯಾಲಿ ಬಳಿಕ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.
