ಬಿಲಾಸ್ಪುರ: ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಬಿಲಾಸ್ಪುರದಲ್ಲಿ ನಡೆದಿದೆ.
ಛತ್ತೀಸ್ಗಢದ ಬಿಲಾಸ್ಪುರದ ಲಾಲ್ಖಾದನ್ ಬಳಿ ಪ್ರಯಾಣಿಕ ರೈಲು ಮತ್ತು ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಹಲವಾರು ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ 6 ಪ್ರಯಾಣಿಕರು ಸಾವನ್ನಪ್ಪಿದ್ದು, 12 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
