ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ಸೋಮವಾರ ನೇರ ಸಂದರ್ಶನದಲ್ಲಿ ರೋಸ್ಟರ್ ಕಂ ಮೆರಿಟ್ ಮೂಲಕ ಅಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಶ್ರೀರಾಮನಗರ ರಸ್ತೆ, ಎಸ್.ಎಸ್ ಹಾಸ್ಪಿಟಲ್ ಹತ್ತಿರ, ಎನ್.ಸಿ.ಸಿ ಕ್ಯಾಂಪ್ ಪಕ್ಕ, ದಾವಣಗೆರೆ-577005 ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಯನ್ನು ಕಚೇರಿಯ ನಾಮಫಲಕದಲ್ಲಿ ಪ್ರಚುರ ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.
