BREAKING: ಇಂದು ಬಾಗಲಕೋಟೆಯಲ್ಲಿ ಸರ್ಕಾರಿ ಗೌರವದೊಂದಿಗೆ ಮಾಜಿ ಸಚಿವ ಹೆಚ್.ವೈ. ಮೇಟಿ ಅಂತ್ಯಕ್ರಿಯೆ: ಸಿಎಂ ಸಿದ್ಧರಾಮಯ್ಯ ಭಾಗಿ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ( 79) ಅವರು ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹುಲ್ಲಪ್ಪ ಯಮನಪ್ಪ ಮೇಟಿ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಬುಧವಾರ ಮಧ್ಯಾಹ್ನ ಬಾಗಲಕೋಟೆಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. 1989 ರಲ್ಲಿ ಗುಳೇದಗುಡ್ಡದಿಂದ ಮೊದಲ ಬಾರಿ ಶಾಸಕರಾಗಿದ್ದರು. 4 ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಜನತಾ ಪರಿವಾರದ ಹಿನ್ನೆಲೆಯ ಅವರು ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದರು. ಬಾಗಲಕೋಟೆಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2005ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಸೇರಿದಾಗ ಜೆಡಿಎಸ್ ನಿಂದ ಹೊರಬಂದ ಮೇಟಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. 2013ರಲ್ಲಿ ಬಾಗಲಕೋಟೆಯಿಂದ ಜಯಗಳಿಸಿ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದರು. 2024ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

ಹೆಚ್.ವೈ. ಮೇಟಿ ಅವರ ಸ್ವಗ್ರಾಮ ತಿಮ್ಮಾಪುರದಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಬೆಂಗಳೂರಿನಿಂದ ಬಾಗಲಕೋಟೆಗೆ ಬೆಳಗ್ಗೆ ಪಾರ್ಥಿವಶರೀರ ತಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಸ್ವಗ್ರಾಮ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read