HomeJobsಎಸ್ಎಸ್ಎಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಎಸ್ಎಸ್ಎಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ: ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಗುರುತಿಸಲು ಸರ್ಕಾರದ ನಿರ್ದೇಶನದಂತೆ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ನಿಬಂಧನೆಗಳಿಗೆ ಒಳಪಟ್ಟು ಕಂದಾಯ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅರ್ಜಿಯನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್, 13 ರ ಸಂಜೆ 5.30 ಗಂಟೆಯೊಳಗೆ ಅಥವಾ ಮುಂಚಿತವಾಗಿ https://karnemakaone.kar.nic.in/abcd/ ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಲು ಸೂಚಿಸಿದೆ. ನಿಗದಿತ ಅವಧಿಯ ನಂತರ ಬಂದ ಅರ್ಜಿ ಸ್ವೀಕರಿಸಲಾಗುವುದಿಲ್ಲ ಎಂದು ಪೊನ್ನಂಪೇಟೆ ತಾಲ್ಲೂಕು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular